ರಾಮೇಶ್ವರಂ ಕೆಫೆ ತಿಂಡಿಯಲ್ಲಿ ಜಿರಳೆ ಪತ್ತೆ ಕೇಸ್​​ಗೆ ಟ್ವಿಸ್ಟ್​; 25 ಲಕ್ಷ ಹಣಕ್ಕಾಗಿ ಬ್ಲಾಕ್​ಮೇಲ್..!

author-image
Ganesh
Updated On
ರಾಮೇಶ್ವರಂ ಕೆಫೆ ತಿಂಡಿಯಲ್ಲಿ ಜಿರಳೆ ಪತ್ತೆ ಕೇಸ್​​ಗೆ ಟ್ವಿಸ್ಟ್​; 25 ಲಕ್ಷ ಹಣಕ್ಕಾಗಿ ಬ್ಲಾಕ್​ಮೇಲ್..!
Advertisment
  • ಏರ್​ಪೋರ್ಟ್ ಠಾಣೆಯಲ್ಲಿ ಎಫ್​ಐಆರ್ ದಾಖಲು
  • ಬ್ರಿಗೇಡ್ ರಸ್ತೆ ಬಳಿ ಹಣ ತಂದುಕೊಡುವಂತೆ ಬೆದರಿಕೆ ಕರೆ
  • ರಾಮೇಶ್ವರಂ ಕೆಫೆ ಹೆಡ್ ಸುಮಂತ್ ಅವರಿಂದ ಕೇಸ್

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಿರುವ ರಾಮೇಶ್ವರಂ ಕೆಫೆ (Rameshwaram cafe) ತಿಂಡಿಯಲ್ಲಿ ಜಿರಳೆ ಪತ್ತೆ ಆರೋಪ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರಕರಣ ಸಂಬಂಧ ಏರ್​ಪೋರ್ಟ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಬೆಂಗಳೂರು ವಿಭಾಗದ ರಾಮೇಶ್ವರಂ ಕೆಫೆ ಹೆಡ್ ಸುಮಂತ್ ಕೊಟ್ಟ ದೂರನ್ನು ಆಧರಿಸಿ ಎಫ್​ಐಆರ್ ದಾಖಲಾಗಿದೆ. ಜಿರಳೆ ಪತ್ತೆ ಬೆನ್ನಲ್ಲೇ, ಕೆಲವು ಅಪರಿಚಿತರು ಹಣಕ್ಕಾಗಿ ಡಿಮ್ಯಾಂಡ್ ಮಾಡ್ತಿದ್ದಾರೆ ಎಂಬ ಆರೋಪ ಕಳಿಬಂದಿದೆ. ಊಟ ಕೆಟ್ಟದಾಗಿದೆ ಎಂದು ಆರೋಪಿಸಿ ಬ್ಲಾಕ್ ಮೇಲ್ ಮಾಡಲಾಗಿದೆ.

ಸೋಷಿಯಲ್ ಮೀಡಿಯಾದಲ್ಲಿ ಹೋಟೆಲ್ ಬಗ್ಗೆ ಕೆಟ್ಟದಾಗಿ ಬಿಂಬಿಸೋದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೇ ಫೋನ್ ಮಾಡಿ 25 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಬ್ರಿಗೇಡ್ ರಸ್ತೆಗೆ ಹಣ ತಂದುಕೊಡು ಎಂದು ಅಪರಿಚಿತ ವ್ಯಕ್ತಿ ಕರೆ ಮಾಡ್ತಿರೋದಾಗಿ ಪೊಲೀಸರಿಗೆ ದೂರು ನೀಡಲಾಗಿದೆ.

ಇದನ್ನೂ ಓದಿ: ಕೆ.ಜಿ ಹಳ್ಳಿ ಗಲಭೆ ಪ್ರಕರಣ: ಮೂವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ NIA ವಿಶೇಷ ನ್ಯಾಯಾಲಯ

ದೂರು ಆಧರಿಸಿ ಪೊಲೀಸರು ಅಸಲಿ ಸತ್ಯ ಏನು ಅನ್ನೋದನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ. ರಾಮೇಶ್ವರಂ ಕೆಫೆಯಲ್ಲಿ ತಿಂಡಿ ತೆಗೆದುಕೊಂಡಾಗ ಹುಳ ಪತ್ತೆಯಾಗಿದ್ದಾಗಿ ವಿಡಿಯೋ ಹರಿದಾಡುತ್ತಿದೆ. ವಿಡಿಯೋದಲ್ಲಿ ಕೆಫೆ ಸಿಬ್ಬಂದಿ, ಗ್ರಾಹಕರಿಗೆ ತಪ್ಪಾಯ್ತು ಅಂತಾ ಕ್ಷಮೆ ಕೇಳ್ತಿದ್ದಾರೆ. ಗ್ರಾಹಕರು ಏರುಧ್ವನಿಯಲ್ಲಿ ಗದರಿಸುತ್ತಿರೋದನ್ನು ನೋಡಬಹುದಾಗಿದೆ.

ಇದನ್ನೂ ಓದಿ: ಚಿಕ್ಕಮಗಳೂರಲ್ಲಿ ಮಳೆಯಿಂದಾಗಿ ನದಿಗೆ ಪಲ್ಟಿಯಾದ ವಾಹನ.. ರಾಜ್ಯದಲ್ಲಿ ಮಳೆಯಿಂದ ಏನೆಲ್ಲ ಆಗಿದೆ..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment