newsfirstkannada.com

WTC Final: ಟೀಂ ಇಂಡಿಯಾಗೆ ಸ್ಪೆಷಲ್ ಮೆಸೇಜ್ ಕಳುಹಿಸಿದ ರಿಷಬ್ ಪಂತ್

Share :

10-06-2023

    ಪಂತ್​ಗೆ ಭೀಕರ ಅಪಘಾತ, ಕ್ರಿಕೆಟ್ ಟೂರ್ನಿಗಳಿಂದ ಔಟ್

    ಟೀಂ ಇಂಡಿಯಾಗೆ ಕಾಡ್ತಿದೆ ರಿಷಬ್ ಅನುಪಸ್ಥಿತಿ

    ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನಲ್ಲಿ ಭಾರತಕ್ಕೆ ಹಿನ್ನಡೆ

ವಿಕೆಟ್ ಕೀಪರ್ ರಿಷಭ್ ಪಂತ್‌, ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾಗೆ ವಿಶೇಷ ಸಂದೇಶ ರವಾನಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ ಹಿನ್ನೆಲೆಯಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಿಂದ ಪಂತ್ ಹೊರಗುಳಿದಿದ್ದು, ಮನೆಯಲ್ಲೇ ಕ್ರಿಕೆಟ್ ಪಂದ್ಯ ವೀಕ್ಷಿಸುತ್ತಿದ್ದಾರೆ.

ತಾವು WTC ಫೈನಲ್ ಪಂದ್ಯ ವೀಕ್ಷಿಸುತ್ತಿರುವ ಫೋಟೋ ಹಂಚಿಕೊಂಡಿರೋ ಪಂತ್, ಹಾರ್ಟ್‌ ಸಿಂಬಲ್‌ ಎಮೋಜಿ ಮೂಲಕ, ನನ್ನ ಹೃದಯವು ತಂಡದ ಜತೆಗಿದೆ ಎಂಬ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ರಿಷಬ್ ಪಂತ್ ಅವರು 2022 ಡಿಸೆಂಬರ್ 30 ರಂದು ದೆಹಲಿಯಿಂದ ಡೆಹ್ರಾಡೂನ್​ಗೆ ಹೋಗುತ್ತಿದ್ದಾಗ ಅವರ ಕಾರು ಅಪಘಾತಕ್ಕೆ ಒಳಗಾಯ್ತು. ಪರಿಣಾಮ ಪಂತ್ ಗಂಭೀರವಾಗಿ ಗಾಯಗೊಂಡಿದ್ದರು, ಇದೀಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ.

ಸದ್ಯ ಇಂಗ್ಲೆಂಡ್​​ನಲ್ಲಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ನಡೆಯುತ್ತಿದೆ. ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಚಾಂಪಿಯನ್​ಶಿಪ್ ಪಟ್ಟಕ್ಕಾಗಿ ಸೆಣಸಾಟ ನಡೆಸುತ್ತಿದ್ದು, ಇಂದು 4ನೇ ದಿನದ ಹೋರಾಟವಾಗಿದೆ. ಎದುರಾಳಿ ಆಸ್ಟ್ರೇಲಿಯಾ ತಂಡವು ಎರಡನೇ ಇನ್ನಿಂಗ್ಸ್ ಆಡುತ್ತಿದ್ದು, 4 ವಿಕೆಟ್ ಕಳೆದುಕೊಂಡು 123 ರನ್​ಗಳಿಸಿದೆ. ಮೊದಲ ಇನ್ನಿಂಗ್ಸ್​ನಲ್ಲಿ 296 ರನ್​ಗಳಿಗೆ ಆಲ್​ಔಟ್ ಆಗಿರುವ ಭಾರತ, 296 ರನ್​ಗಳ ಹಿನ್ನಡೆಯನ್ನು ಅನುಭವಿಸಿದೆ.

ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

WTC Final: ಟೀಂ ಇಂಡಿಯಾಗೆ ಸ್ಪೆಷಲ್ ಮೆಸೇಜ್ ಕಳುಹಿಸಿದ ರಿಷಬ್ ಪಂತ್

https://newsfirstlive.com/wp-content/uploads/2023/06/RISHAB_PAN.jpg

Load More