/newsfirstlive-kannada/media/post_attachments/wp-content/uploads/2025/07/Hulk-Hogan-1.jpg)
ವೃತ್ತಿಪರ ಕುಸ್ತಿ ಸೂಪರ್‌ಸ್ಟಾರ್ ಹಲ್ಕ್ ಹೋಗನ್ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. WWE ನ ಅತಿದೊಡ್ಡ ಸ್ಟಾರ್ಗಳಲ್ಲಿ ಒಬ್ಬರಾಗಿದ್ದ ಹೋಗನ್ ತಮ್ಮ 71ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.
ಬಹಳ ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಹೋಗನ್ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ನಿನ್ನೆ ಹಲ್ಕ್ ಹೋಗನ್‌ಗೆ ಹೃದಯಾಘಾತವಾಗಿದೆ. ಕೂಡಲೇ ವೈದ್ಯಕೀಯ ತಂಡವನ್ನ ಮನೆಗೆ ಕರೆಸಲಾಗಿದೆ. ಅಲ್ಲಿಂದ ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಇದನ್ನೂ ಓದಿ: ಫ್ಯಾನ್ಸ್ಗೆ ಸರ್ಪ್ರೈಸ್ ಕೊಟ್ಟ ರಿಷಭ್ ಪಂತ್.. ಮತ್ತೊಮ್ಮೆ ಅಭಿಮಾನಿಗಳ ಹೃದಯಗೆದ್ದ ಸ್ಟಾರ್..!
ಆಸ್ಪತ್ರೆ ತಲುಪುವ ಮುನ್ನವೇ ಅವರು ನಿಧನರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.WWE ಇತಿಹಾಸದಲ್ಲಿ ಅತ್ಯಂತ ಪ್ರಖ್ಯಾತಿ ಪಡೆದಿದ್ದವರಲ್ಲಿ ಹೋಗನ್ ಒಬ್ಬರಾಗಿದ್ದರು. ಇದೀಗ ಅವರ ನಿಧನಕ್ಕೆ ಪ್ರಪಂಚದಾದ್ಯಂತ WWE ಅಭಿಮಾನಿಗಳು ಕಂಬನಿ ಮಿಡಿದ್ದಾರೆ.
ಇದನ್ನೂ ಓದಿ: ರಾಮೇಶ್ವರಂ ಕೆಫೆ ತಿಂಡಿಯಲ್ಲಿ ಜಿರಳೆ ಪತ್ತೆ ಕೇಸ್ಗೆ ಟ್ವಿಸ್ಟ್; 25 ಲಕ್ಷ ಹಣಕ್ಕಾಗಿ ಬ್ಲಾಕ್ಮೇಲ್..!
WWE is saddened to learn WWE Hall of Famer Hulk Hogan has passed away.
One of pop culture’s most recognizable figures, Hogan helped WWE achieve global recognition in the 1980s.
WWE extends its condolences to Hogan’s family, friends, and fans.— WWE (@WWE) July 24, 2025
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ