/newsfirstlive-kannada/media/post_attachments/wp-content/uploads/2024/10/RAIN-RAIN-1.jpg)
ಭಾರತೀಯ ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಶಾಕಿಂಗ್ ನ್ಯೂಸ್ ಕೊಟ್ಟಿದೆ. ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹೇಳಿದೆ.
ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರಿನ ಅಧ್ಯಕ್ಷ ಸಿ. ಎಸ್. ಪಾಟೀಲ್ ಹೇಳುವ ಪ್ರಕಾರ ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹೇಳಿದ್ದಾರೆ. ರಾಜ್ಯದ ಒಳನಾಡು, ದಕ್ಷಿಣ ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಇದನ್ನೂ ಓದಿ:ಕರ್ನಾಟಕದ ಈ ಜಿಲ್ಲೆಗಳಲ್ಲಿ ವರುಣನ ಆರ್ಭಟ; ಇಂದಿನಿಂದ ಎಷ್ಟು ದಿನಗಳ ಕಾಲ ಮಳೆ ಬೀಳಲಿದೆ?
ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಚಾಮರಾಜನಗರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹೇಳಲಾಗಿದೆ.
ಇನ್ನು ಫೆಂಗಲ್ ಚಂಡಮಾರುತದ ಅಬ್ಬರದ ಹಿನ್ನೆಲಯಲ್ಲಿ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ನಾಳೆಯಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕೂಡ ರಜೆಯನ್ನು ಘೋಷಣೆ ಮಾಡಲಾಗಿದೆ. ಕರ್ನಾಟಕ ರಾಜ್ಯನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ವೊಂದನ್ನು ಮಾಡಿದ್ದು. ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಹಲವು ಭಾಗದಲ್ಲಿ ಮಳೆಯಾಗಲಿದೆ ಎಂದು ಹೇಳಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ