ಉಪ್ಪಿಟ್ಟಲ್ಲಿ ಹಲ್ಲಿ ಬಿದ್ದಿರುವುದನ್ನು ನೋಡಿರಲಿಲ್ಲವೇ ಸಿಬ್ಬಂದಿ?
ಅದೇ ಆಹಾರ ತಿಂದು ವಾಂತಿ-ಭೇದಿ ಮಾಡಿದ ಶಾಲಾ ಮಕ್ಕಳು
ಶಾಲಾ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪೋಷಕರು
ಯಾದಗಿರಿ: ಹಲ್ಲಿ ಬಿದ್ದಿದ್ದ ಬಿಸಿಯೂಟ ತಿಂದು 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದಲ್ಲಿ ನಡೆದಿದೆ.
ಕೆಂಭಾವಿ ಪಟ್ಟಣದ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಮಧ್ಯಾಹ್ನ ಬಿಸಿಯೂಟದಲ್ಲಿ ಉಪ್ಪಿಟ್ಟನ್ನು ಸೇವನೆ ಮಾಡಿದ್ದಾರೆ. ಈ ವೇಳೆ ಉಪ್ಪಿಟ್ಟಿನಲ್ಲಿ ಹಲ್ಲಿ ಬಿದ್ದಿರುವುದನ್ನು ಶಾಲೆಯಲ್ಲಿ ಯಾರು ಗಮನಿಸಿಲ್ಲ. ಹೀಗಾಗಿ ವಿದ್ಯಾರ್ಥಿನಿಯರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದ್ದು ಹೊಟ್ಟೆ ನೋವು ಹೆಚ್ಚಾಗಿದೆ.
ತಕ್ಷಣ ಪಟ್ಟಣದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ವಿದ್ಯಾರ್ಥಿನಿಯರನ್ನು ದಾಖಲು ಮಾಡಲಾಗಿದೆ. ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಶಾಲಾ ಸಿಬ್ಬಂದಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲಾ ಪಂಚಾಯತಿ ಸಿಇಒ ಗರೀಮಾ ಪನ್ವಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯವನ್ನು ವಿಚಾರಣೆ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ