newsfirstkannada.com

ಸಂಸದ ಪ್ರತಾಪ್ ಸಿಂಹರನ್ನು ಅಭಿನಂದಿಸಿದ ಯದುವೀರ್ ಒಡೆಯರ್..!

Share :

Published March 14, 2024 at 9:25am

    ಬಿಜೆಪಿ ಟಿಕೆಟ್ ಘೋಷಣೆ ಬನ್ನಲ್ಲೇ ಒಡೆಯರ್ ಸಂದೇಶ

    ಕೊಡಗು-ಮೈಸೂರು ಲೋಸಕಭೆ ಕ್ಷೇತ್ರದ ಅಭ್ಯರ್ಥಿ ಒಡೆಯರ್

    ಪ್ರಧಾನಿ ಮೋದಿಗೆ, ಯಡಿಯೂರಪ್ಪಗೆ ಧನ್ಯವಾದ ತಿಳಿಸಿದ ಒಡೆಯರ್

ಮೈಸೂರು: ಟಿಕೆಟ್​ ಘೋಷಣೆ ಬೆನ್ನಲ್ಲೇ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಿಜೆಪಿ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ.

ಈ ಬಗ್ಗೆ ಪೋಸ್ಟ್ ಮಾಡಿರುವ ಯದುವೀರ್, ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಭಾರತೀಯ ಜನತಾ ಪಕ್ಷದಿಂದ ಅವಕಾಶ ನೀಡಲಾಗಿದೆ. ಚುನಾವಣೆಯಲ್ಲಿ ಪಕ್ಷದಿಂದ ಪ್ರತಿನಿಧಿಸಲು ಅವಕಾಶ ಮಾಡಿಕೊಟ್ಟ, ಪ್ರಧಾನಿ ಮೋದಿ, ಜೆ.ಪಿ. ನಡ್ಡಾ, ಅಮಿತ್ ಷಾ, ಬಿ ಎಸ್ ಯಡಿಯೂರಪ್ಪರಿಗೆ ಧನ್ಯವಾದಗಳು ಎಂದಿದ್ದಾರೆ.

ಮೈಸೂರು-ಕೊಡಗಿನ ಜನರ ಶುಭ ಹಾರೈಕೆ ಮತ್ತು ಬೆಂಬಲವನ್ನು ಎದುರು ನೋಡುತ್ತಿದ್ದೇನೆ ಅಂತ ಬರೆದುಕೊಂಡಿದ್ದಾರೆ. ಇನ್ನು ಎರಡು ಅವಧಿಯನ್ನು ಯಶಸ್ವಿಯಾಗಿ ಪೂರೈಸಿದ್ದಕ್ಕಾಗಿ ನಾನು ಪ್ರತಾಪ್ ಸಿಂಹ ಅವರನ್ನು ಅಭಿನಂದಿಸುತ್ತೇನೆ ಅಂತ ಕೂಡ ಉಲ್ಲೇಖಿಸಿದ್ದಾರೆ. ಸದ್ಯ ನಾಳೆ ಯದುವೀರ್ ಒಡೆಯರ್ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಯದುವೀರ್ ಪಕ್ಷ ಸೇರ್ಪಡೆಯಾಗಲಿದ್ದು, ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಲಿದ್ದಾರೆ.

ಒಡೆಯರ್ ಹೇಳಿದ್ದೇನು?
ಸಮಸ್ತ ಮೈಸೂರು-ಕೊಡಗು ಪ್ರಜಾಬಾಂಧವರಿಗೆ ನನ್ನ ನಮಸ್ಕಾರ.
ನಿಮ್ಮೆಲ್ಲರಿಗೂ ಈಗಾಗಲೇ ತಿಳಿದಿರುವಂತೆ, ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಭಾರತೀಯ ಜನತಾ ಪಕ್ಷದಿಂದ ಅವಕಾಶ ನೀಡಲಾಗಿದೆ.

ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಕರ್ನಾಟಕ ಜನತೆಯ ಬೆಂಬಲ ಮತ್ತು ಭಾವನಾತ್ಮಕ ಸಂಪರ್ಕವು ನಿಸ್ಸಂದೇಹವಾಗಿ ನಮ್ಮೊಟ್ಟಿಗಿದೆ. ಕಳೆದ ಒಂಭತ್ತು ವರ್ಷಗಳಿಂದ ನಾನು ನಮ್ಮ ಕ್ಷೇತ್ರದ ಹಾಗು ನಮ್ಮ ರಾಜ್ಯದ ಸಾರ್ವಜನಿಕ ಜೀವನದ ಭಾಗವಾಗಿದ್ದು ಅನೇಕ ಪ್ರಜಾಬಾಂಧವರನ್ನು ಭೇಟಿಮಾಡುವ ಅವಕಾಶ ಸಿಕ್ಕಿದ್ದು, ನನ್ನನ್ನು ನೀವೆಲ್ಲರೂ ಮುಕ್ತವಾಗಿ ಒಬ್ಬ ಸ್ನೇಹಿತನಂತೆ ಸ್ವಾಗತಿಸಿ ಆತಿಥ್ಯವನ್ನು ನೀಡಿದ್ದೀರಿ, ಈಗ ಆ ಋಣವನ್ನು ತೀರಿಸಲು ಅವಕಾಶ ಕೇಳುತ್ತಿದ್ದೇನೆ.

ನಿಮ್ಮೆಲ್ಲರ ಬೆಂಬಲ ಮತ್ತು ಆಶೀರ್ವಾದದಿಂದ ಮೈಸೂರು ಮತ್ತು ಕೊಡಗಿನ ಸರ್ವಾಂಗೀಣ ಏಳಿಗೆ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡಲು ನಾನು ಆಶಿಸುತ್ತಿದ್ದೇನೆ, ಹಾಗು ಮೈಸೂರು-ಕೊಡಗಿನ ಜನರ ಶುಭ ಹಾರೈಕೆ ಮತ್ತು ಬೆಂಬಲವನ್ನು ಎದುರು ನೋಡುತ್ತಿದ್ದೇನೆ.

ಚುನಾವಣೆಯಲ್ಲಿ ಪಕ್ಷವನ್ನು ಪ್ರತಿನಿಧಿಸಲು ನನ್ನ ಮೇಲೆ ನಂಬಿಕೆ ಇಟ್ಟಿರುವ ಗೌರವಾನ್ವಿತ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರಿಗೂ, ಭಾ.ಜ.ಪ ದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ. ನಡ್ಡಾ ಅವರಿಗೂ, ಮಾನನೀಯ ಗೃಹಮಂತ್ರಿಗಳಾದ ಶ್ರೀ ಅಮಿತ್ ಷಾ ಅವರಿಗೂ, ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಶ್ರೀ ಬಿ ಎಲ್ ಸಂತೋಷ್ ಅವರಿಗೂ ಹಾಗೂ ವಿಶೇಷವಾಗಿ ಬಿಜೆಪಿ ಪಕ್ಷದ ಆತ್ಮ ಜೀವವಾಗಿರುವ ಕಾರ್ಯಕರ್ತರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ಎರಡು ಅವಧಿಯನ್ನು ಯಶಸ್ವಿಯಾಗಿ ಪೂರೈಸಿದ್ದಕ್ಕಾಗಿ ನಾನು ಶ್ರೀ ಪ್ರತಾಪ್ ಸಿಂಹ ಅವರನ್ನು ಅಭಿನಂದಿಸುತ್ತೇನೆ. ಈ ಕ್ಷೇತ್ರದ ಅಭಿವೃದ್ಧಿಗೆ ಅವರ ಬದ್ಧತೆ ನಮ್ಮೆಲ್ಲರ ಭವಿಷ್ಯದ ಆಕಾಂಕ್ಷಿಗಳಿಗೆ ಭದ್ರ ಅಡಿಪಾಯ ಹಾಕಿ ಕೊಟ್ಟಿದೆ. ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯ ಆಶಿರ್ವಾದಾನುಗ್ರಹಗಳು ನಮ್ಮೆಲ್ಲರ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸುತ್ತೆನೆ- ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಂಸದ ಪ್ರತಾಪ್ ಸಿಂಹರನ್ನು ಅಭಿನಂದಿಸಿದ ಯದುವೀರ್ ಒಡೆಯರ್..!

https://newsfirstlive.com/wp-content/uploads/2024/03/YADUVEER-1.jpg

Load More