/newsfirstlive-kannada/media/post_attachments/wp-content/uploads/2025/04/Yashasvi_Jaiswal-1.jpg)
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ರಾಜಸ್ಥಾನ್ ರಾಯಲ್ಸ್ ಓಪನರ್ ಯಶಸ್ವಿ ಜೈಸ್ವಾಲ್ ಯಶಸ್ವಿ ಪ್ರದರ್ಶನ ನೀಡುತ್ತಿದ್ದು ಅಮೋಘ ಅರ್ಧಶತಕ ಸಿಡಿಸಿದ್ದಾರೆ.
ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆರ್ಸಿಬಿ ನಾಯಕ ರಜತ್ ಪಾಟಿದಾರ್ ಅವರು ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕರಾಗಿ ಕ್ಯಾಪ್ಟನ್ ಸಂಜು ಸ್ಯಾಮ್ಸನ್ ಹಾಗೂ ಯಶಸ್ವಿ ಜೈಸ್ವಾಲ್ ಕ್ರೀಸ್ಗೆ ಆಗಮಿಸಿದ್ದರು. ಆದರೆ 15 ರನ್ ಗಳಿಸಿ ಆಡುವಾಗ ಸಂಜು ಕೃನಾಲ್ ಪಾಂಡ್ಯ ಬೌಲಿಂಗ್ನಲ್ಲಿ ಔಟ್ ಆದರು.
ಇದನ್ನೂ ಓದಿ:ಟೀಮ್ ಇಂಡಿಯಾದ ಯುವ ಆಟಗಾರ್ತಿಗೆ ಬ್ಯಾಟ್ ಗಿಫ್ಟ್ ಮಾಡಿದ ಹಾರ್ದಿಕ್ ಪಾಂಡ್ಯ.. ಈಕೆ ಯಾರು? -Video
ಅದರೆ ರಿಯಾನ್ ಪರಾಗ್ ಜೊತೆ ಬ್ಯಾಟಿಂಗ್ ಮುಂದುವರೆಸಿದ ಯಶಸ್ವಿ ಜೈಸ್ವಾಲ್ ಅಮೋಘವಾದ ಅರ್ಧಶತಕ ಸಿಡಿಸಿ ಆರ್ಸಿಬಿ ಬೌಲರ್ಗಳಿಗೆ ಶಾಕ್ ನೀಡಿದ್ದಾರೆ. ಪಂದ್ಯದಲ್ಲಿ ಕೇವಲ 35 ಎಸೆತಗಳನ್ನು ಎದುರಿಸಿದ ಜೈಸ್ವಾಲ್ 1 ಸಿಕ್ಸರ್ ಹಾಗೂ 7 ಬ್ಯೂಟಿಫುಲ್ ಬೌಂಡರಿಗಳಿಂದ 50 ರನ್ ಚಚ್ಚಿದರು. ಈ ಟೂರ್ನಿಯಲ್ಲಿ ಇದು ಜೈಸ್ವಾಲ್ ಅವರ 2ನೇ ಹಾಫ್ಸೆಂಚುರಿ ಆಗಿದೆ.
ಸದ್ಯ ರಾಜಸ್ಥಾನ್ ಟೀಮ್ 13.4 ಓವರ್ಗಳಲ್ಲಿ 2 ವಿಕೆಟ್ಗೆ 106 ರನ್ಗಳಿಂದ ಬ್ಯಾಟಿಂಗ್ ಮಾಡುತ್ತಿದೆ. ಆರಂಭಿಕ ಪಂದ್ಯಗಳಲ್ಲಿ ಕಳಪೆ ಬ್ಯಾಟಿಂಗ್ ಮಾಡಿದ್ದ ಯಂಗ್ ಓಪನರ್ ಈಗ ಮತ್ತೆ ಟ್ರ್ಯಾಕ್ಗೆ ಮರಳಿದ್ದಾರೆ. ಇನ್ನು ಈ ಪಂದ್ಯದಲ್ಲಿ ಆರ್ಸಿಬಿ ಹಾಗೂ ಆರ್ಆರ್ ಎರಡೂ ತಂಡಗಳು ಗೆಲುವನ್ನೇ ಎದುರು ನೋಡುತ್ತಿದೆ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ