ಮೊದಲ ಪಂದ್ಯದಲ್ಲೇ ಶತಕ ಸಿಡಿಸಿದ ಜೈಸ್ವಾಲ್
ಈ ಮೂಲಕ ಹಲವು ದಾಖಲೆ ಬರೆದ ಯಂಗ್ಸ್ಟರ್
ಜೈಸ್ವಾಲ್ ವಿಂಡೀಸ್ ಬೌಲರ್ಸ್ ಬೆವರಿಳಿಸಿದ್ರು..!
ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರೋ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಯಂಗ್ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ ಅಮೋಘ ದಾಖಲೆ ಮಾಡಿದ್ದಾರೆ. ಇಂಟರ್ ನ್ಯಾಷನಲ್ ಕ್ರಿಕೆಟ್ಗೆ ಡೆಬ್ಯೂಟ್ ಮಾಡಿದ ಮೊದಲ ಪಂದ್ಯದಲ್ಲೇ ಜೈಸ್ವಾಲ್ ಶತಕ ಸಿಡಿಸಿ ಅಪರೂಪಸ ಸಾಧನೆ ಮಾಡಿದ್ದಾರೆ.
ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾಗೆ ಸಾಥ್ ನೀಡಿದ ಜೈಸ್ವಾಲ್ 2ನೇ ದಿನದಾಟದ ಅಂತ್ಯಕ್ಕೆ 350 ಎಸೆತಗಳಲ್ಲಿ ಬರೋಬ್ಬರಿ 143 ರನ್ ಬಾರಿಸಿ ಅಜೇಯರಾಗಿ ಉಳಿದರು. ಮೊದಲ ಪಂದ್ಯದಲ್ಲೇ ಶತಕ ಸಿಡಿಸಿದ ಜೈಸ್ವಾಲ್ ಹಲವು ಮೈಲಿಗಲ್ಲುಗಳು ಸೃಷ್ಟಿಸಿದ್ದಾರೆ.
ಮೊದಲ ಪಂದ್ಯದಲ್ಲೇ ಶತಕ ಸಿಡಿಸಿದ 17ನೇ ಆಟಗಾರ!
ಜೈಸ್ವಾಲ್ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸಿದ 17ನೇ ಆಟಗಾರ ಎನಿಸಿಕೊಂಡಿದ್ದಾರೆ. ಈ ಮುನ್ನ ಲಾಲಾ ಅಮರನಾಥ್, ದೀಪಕ್ ಶೋಧನ್, ಎಜಿ ಕೃಪಾಲ್ ಸಿಂಗ್, ಅಬ್ಬಾಸ್ ಅಲಿ ಬೇಗ್, ಹನುಮಂತ್ ಸಿಂಗ್, ಗುಂಡಪ್ಪ ವಿಶ್ವನಾಥ್, ಸುರೀಂದರ್ ಅಮರನಾಥ್, ಮೊಹಮ್ಮದ್ ಅಜರುದ್ದೀನ್, ಪ್ರವೀಣ್ ಆಮ್ರೆ, ಸೌರವ್ ಗಂಗೂಲಿ, ವೀರೇಂದ್ರ ಸೆಹ್ವಾಗ್, ಸುರೇಶ್ ರೈನಾ, ಶಿಖರ್ ಧವನ್, ರೋಹಿತ್ ಶರ್ಮಾ, ಪೃಥ್ವಿ ಶಾ, ಮತ್ತು ಶ್ರೇಯಸ್ ಅಯ್ಯರ್ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಬಾರಿಸಿದ್ದರು. ಇವರ ಸಾಲಿಗೆ ಜೈಸ್ವಾಲ್ ಸೇರಿದ್ದಾರೆ.
ಅಜೇಯ 143 ರನ್ ಬಾರಿಸಿರೋ ಜೈಸ್ವಾಲ್ ಇಂಗ್ಲೆಂಡ್ ವಿರುದ್ಧ ಸೌರವ್ ಗಂಗೂಲಿ 131 ರನ್ ಗಳಿಸಿದ್ದ 27 ವರ್ಷಗಳ ಹಿಂದಿನ ದಾಖಲೆ ಮುರಿದಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ