newsfirstkannada.com

INDvsAFG: ಯಶಸ್ವಿ ಜೈಸ್ವಾಲ್, ಶಿವಂ ದುಬೆ ಅಬ್ಬರಕ್ಕೆ ಬೆಚ್ಚಿ ಬಿದ್ದ ಅಫ್ಘಾನ್‌.. ಭಾರತಕ್ಕೆ ಭರ್ಜರಿ ಜಯ

Share :

Published January 14, 2024 at 10:31pm

Update January 14, 2024 at 10:33pm

  2ನೇ ಟಿ20 ಪಂದ್ಯದಲ್ಲಿ ಭಾರತಕ್ಕೆ 6 ವಿಕೆಟ್‌ಗಳ ಭರ್ಜರಿ ಜಯ

  ಯಶಸ್ವಿ ಜೈಸ್ವಾಲ್‌, ಶಿವಂ ದುಬೆ ಅಬ್ಬರ ಬ್ಯಾಟಿಂಗ್ ಪ್ರದರ್ಶನ

  ಒಂದು ಪಂದ್ಯ ಬಾಕಿ ಇರುವಾಗಲೇ ಟಿ20 ಸರಣಿ ಗೆದ್ದ ರೋಹಿತ್ ಪಡೆ

ಇಂದೋರ್‌ನಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಭಾರತಕ್ಕೆ 6 ವಿಕೆಟ್‌ಗಳ ಭರ್ಜರಿ ಜಯ ಸಿಕ್ಕಿದೆ. ಯಶಸ್ವಿ ಜೈಸ್ವಾಲ್‌, ಶಿವಂ ದುಬೆ ಅಬ್ಬರ ಬ್ಯಾಟಿಂಗ್ ಪ್ರದರ್ಶನಕ್ಕೆ ಎದುರಾಳಿ ಅಫ್ಘಾನಿಸ್ತಾನದ ಬೌಲರ್‌ಗಳು ಸುಸ್ತಾದರು. ಇನ್ನು 26 ಎಸೆತಗಳು ಬಾಕಿ ಇರುವಂತೆ ಗೆಲುವಿನ ದಡ ಸೇರಿದ ಟೀಂ ಇಂಡಿಯಾ ಆಟಗಾರರು ಭರ್ಜರಿ ಸೆಲೆಬ್ರೇಷನ್ ಮಾಡಿದ್ದಾರೆ.

ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿದ ಕ್ಯಾಪ್ಟನ್ ರೋಹಿತ್ ಶರ್ಮಾ ಅವರು ಎದುರಾಳಿ ಅಫ್ಘಾನಿಸ್ತಾನವನ್ನೇ ಬ್ಯಾಟಿಂಗ್‌ಗೆ ಆಹ್ವಾನಿಸಿದ್ರು. ಭಾರತದ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಅಫ್ಘಾನ್ ಆಟಗಾರರು ಆಲ್‌ ಔಟ್ ಆಗೋ ಮೂಲಕ ಭಾರತಕ್ಕೆ 173 ರನ್‌ಗಳ ಟಾರ್ಗೆಟ್ ನೀಡಿದ್ದರು.

ಅಫ್ಘಾನ್ ನೀಡಿದ್ದ ಟಾರ್ಗೆಟ್ ಬೆನ್ನತ್ತಿದ ಟೀಂ ಇಂಡಿಯಾ ಕೂಡ ಆರಂಭದಲ್ಲಿ ಎಡವಿತ್ತು. ಕ್ಯಾಪ್ಟನ್ ರೋಹಿತ್ ಶರ್ಮಾ ಅವರು ಡಕ್ ಔಟ್ ಆಗೋ ಮೂಲಕ ನಿರಾಸೆ ಮೂಡಿಸಿದರು. ಬಳಿಕ ಗ್ರೀಸ್‌ಗಿಳಿದ ವಿರಾಟ್ ಕೊಹ್ಲಿ ಕೂಡ 29 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು. ಈ ಆಘಾತದಲ್ಲಿ ಎದೆಗುಂದದ ಯಶಸ್ವಿ ಜೈಸ್ವಾಲ್ ತಂಡಕ್ಕೆ ಆಸರೆಯಾದರು. ಭರ್ಜರಿ ಅರ್ಧಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್, ಶಿವಂ ದುಬೆ ಜೊತೆ ಸೇರಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಮಾಡಿದರು. ಇವರಿಬ್ಬರ ಜೊತೆಯಾಟಕ್ಕೆ ಮಂಕಾದ ಅಫ್ಘಾನ್ ಆಟಗಾರರು ಮಂಕಾಗಿದ್ದು, ಭಾರತಕ್ಕೆ ಗೆಲುವು ಸುಲಭದ ತುತ್ತಾಯಿತು.

ಇದನ್ನೂ ಓದಿ: Golden duck: ಮತ್ತೆ ನಿರಾಸೆ ಮೂಡಿಸಿದ ರೋಹಿತ್ ಶರ್ಮಾ; ಸತತ 2ನೇ ಪಂದ್ಯದಲ್ಲೂ ಡಕ್‌ ಔಟ್‌!

ಇಂದೋರ್‌ನಲ್ಲಿ ನಡೆದ 2ನೇ ಟಿ20 ಪಂದ್ಯವನ್ನು ಗೆಲ್ಲೋ ಮೂಲಕ ಭಾರತ ತಂಡ ಸರಣಿಯನ್ನು ವಶಪಡಿಸಿಕೊಂಡಿದೆ. ಇನ್ನು ಒಂದು ಪಂದ್ಯ ಬಾಕಿ ಇರುವಾಗಲೇ ಟಿ20 ಸರಣಿ ಗೆದ್ದು ತವರಿನಲ್ಲಿ ಮತ್ತೊಂದು ವಿಜಯದ ಪತಾಕೆ ಹಾರಿಸಿದೆ. ವಿಶ್ವಕಪ್ ಟಿ20 ಹಣಾಹಣಿಗೂ ಮುನ್ನ ಸರಣಿ ಗೆದ್ದಿರೋ ಟೀಂ ಇಂಡಿಯಾಕ್ಕೆ ಆತ್ಮವಿಶ್ವಾಸ ಹೆಚ್ಚಿಸಿದೆ.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ ಫಸ್ಟ್‌ ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

INDvsAFG: ಯಶಸ್ವಿ ಜೈಸ್ವಾಲ್, ಶಿವಂ ದುಬೆ ಅಬ್ಬರಕ್ಕೆ ಬೆಚ್ಚಿ ಬಿದ್ದ ಅಫ್ಘಾನ್‌.. ಭಾರತಕ್ಕೆ ಭರ್ಜರಿ ಜಯ

https://newsfirstlive.com/wp-content/uploads/2024/01/Virat-Kohli-1.jpg

Load More