newsfirstkannada.com

‘ಅಮಿತ್ ಶಾ ಗೂಂಡಾ, ರೌಡಿ, ಕೊಲೆ ಆರೋಪಿ’- ಮೋದಿ, ಬಿಜೆಪಿ ಮೇಲೆ ಯತೀಂದ್ರ ಸಿದ್ದರಾಮಯ್ಯ ಕಿಡಿ

Share :

Published March 29, 2024 at 12:45pm

    ಅಮಿತ್ ಶಾ ಗೂಂಡಾ, ರೌಡಿ. ಇವರಿಗೆ ಕ್ರಿಮಿನಲ್ ಹಿನ್ನೆಲೆಯಲ್ಲಿ ಗಡಿಪಾರು

    ಗುಜರಾತ್‌ನಲ್ಲಿ ನರಮೇಧ ಮಾಡಿದವರು ಯಾರು? ಇಂತಹವರಿಗೆ ಉನ್ನತ ಸ್ಥಾನ

    ಸಂವಿಧಾನ ಬದಲಾವಣೆ ಮಾಡೋದೇ ಇವರ ಹಿಡನ್ ಅಜೆಂಡಾ ಎಂದ ಯತೀಂದ್ರ

ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಮಿತ್ ಶಾ ಗೂಂಡಾ, ರೌಡಿ. ಇವರಿಗೆ ಕ್ರಿಮಿನಲ್ ಹಿನ್ನೆಲೆ ಇದ್ದು ಗಡಿಪಾರು ಆಗಿದ್ದರು ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿರುವ ಯತೀಂದ್ರ ಸಿದ್ದರಾಮಯ್ಯ, ಗುಜರಾತ್‌ನಲ್ಲಿ ನರಮೇಧ ಮಾಡಿದವರು ಯಾರು? ಇಂತಹವರು ದೇಶದ ಉನ್ನತ ಸ್ಥಾನದಲ್ಲಿದ್ದಾರೆ. ಇಂತವರನ್ನ ಪ್ರಧಾನಿ ಮೋದಿಯವರು ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆ. ದೇಶದ ಇತಿಹಾಸದಲ್ಲೇ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಸರ್ಕಾರ ಅಂದ್ರೆ ಅದು ಮೋದಿ ಸರ್ಕಾರ ಎಂದು ಯತೀಂದ್ರ ಸಿದ್ದರಾಮಯ್ಯ ಹಿಗ್ಗಾಮುಗ್ಗ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: Breaking News: ಲೋಕಸಭೆ ಚುನಾವಣೆ ಗೆದ್ದರೆ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ -ಡಾ.ಯತೀಂದ್ರ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹನೂರಿನಲ್ಲಿ ಯತೀಂದ್ರ ಸಿದ್ದರಾಮಯ್ಯ ಪ್ರಚಾರ ಕೈಗೊಂಡಿದ್ದರು. ಈ ವೇಳೆ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ದೇಶದಲ್ಲಿ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇನೆ ಅಂತ ಹೇಳಿದ್ರು. ಈಗ ನಿರೋದ್ಯೋಗಿಗಳಿಗೆ ಉದ್ಯೋಗ ಸೃಷ್ಟಿ ಮಾಡೋದು ಕೇಂದ್ರ ಸರ್ಕಾರದ ಹೊಣೆ ಅಲ್ಲ ಅಂತ ಹೇಳ್ತಾರೆ.

ವಿದೇಶದಲ್ಲಿರುವ ಕಪ್ಪು ಹಣ ವಾಪಸ್ ತರುತ್ತೇವೆ ಅಂದ್ರು ತಂದಿದ್ದಾರಾ. ಸ್ವಿಸ್ ಬ್ಯಾಂಕ್‌ ಅಲ್ಲಿ ಯಾರ್ ಯಾರ ಖಾತೆಯಲ್ಲಿ ಬ್ಲ್ಯಾಕ್‌ಮನಿ ಇದೆ ಅನ್ನೋ ಪಟ್ಟಿ ಕೂಡ ರಿಲೀಸ್ ಮಾಡ್ಲಿಲ್ಲ. ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನ ಬಂದ್ರೆ ಸಂವಿಧಾನ ಬದಲಾವಣೆ ಮಾಡೋದೇ ಇವರ ಹಿಡನ್ ಅಜೆಂಡಾ ಎಂದು ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಅಮಿತ್ ಶಾ ಗೂಂಡಾ, ರೌಡಿ, ಕೊಲೆ ಆರೋಪಿ’- ಮೋದಿ, ಬಿಜೆಪಿ ಮೇಲೆ ಯತೀಂದ್ರ ಸಿದ್ದರಾಮಯ್ಯ ಕಿಡಿ

https://newsfirstlive.com/wp-content/uploads/2024/03/Yathindra-Siddaramiah.jpg

Load More