ಖಾಲಿ ಇರೋ ಹುದ್ದೆಗಳಿಗೆ ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನ; ಅರ್ಹ ಅಭ್ಯರ್ಥಿಗಳು ಕೂಡಲೇ ಅಪ್ಲೈ ಮಾಡಿ!

author-image
Ganesh Nachikethu
Updated On
ಖಾಲಿ ಇರೋ ಹುದ್ದೆಗಳಿಗೆ ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನ; ಅರ್ಹ ಅಭ್ಯರ್ಥಿಗಳು ಕೂಡಲೇ ಅಪ್ಲೈ ಮಾಡಿ!
Advertisment
  • ಡಿಗ್ರಿ ಪಾಸು ಮಾಡಿದವರಿಗೆ ಭರ್ಜರಿ ಗುಡ್​ನ್ಯೂಸ್​​
  • ಕೃಷಿ ಇಲಾಖೆಯಿಂದ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ
  • ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು

ಚಿಕ್ಕಮಗಳೂರು: ನಿಮ್ಮದು ಡಿಗ್ರಿ ಆಗಿದ್ಯಾ? ಒಂದು ಕೆಲಸಕ್ಕಾಗಿ ಹುಡುಕುತ್ತಿದ್ದೀರಾ? ಹಾಗಾದ್ರೆ ನಿಮಗೆ ಇಲ್ಲಿದೆ ಸುವರ್ಣಾವಕಾಶ. ಡಿಗ್ರಿ ಮುಗಿಸಿ ಕಂಪ್ಯೂಟರ್​​ ಬಗ್ಗೆ ಜ್ಞಾನ ಇರೋರು ಯಾರು ಬೇಕಾದ್ರೂ ಕೂಡಲೇ ಈ ಕೆಲಸಕ್ಕೆ ಅರ್ಜಿ ಸಲ್ಲಿಸಬಹುದು.

ಹುದ್ದೆ ಹೆಸರು ಏನು?

ಕೃಷಿ ಇಲಾಖೆಯಿಂದ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಇದು ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನಲ್ಲಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಆಹ್ವಾನ ಮಾಡಲಾದ ಅರ್ಜಿ ಆಗಿದೆ. ತಾತ್ಕಾಲಿಕ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಳು ಅರ್ಜಿ ಹಾಕಬಹುದು.

ವಿದ್ಯಾರ್ಹತೆ ಏನು?

ಅರ್ಹ ಅಭ್ಯರ್ಥಿಗಳು ಯಾವುದಾದ್ರೂ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಡಿಗ್ರಿ ಮಾಡಿರಬೇಕು. ಕಂಪ್ಯೂಟರ್ ಜ್ಞಾನ ಇರಲೇಬೇಕು. ಈ ಕ್ವಾಲಿಟೀಸ್​ ಇರೋ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 10 ಕೊನೆಯ ದಿನ ಆಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ!

ಇನ್ನು, ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಆತ್ಮ ವಿಭಾಗದ ಡಿ.ಪಿ.ಡಿ ಆಗಿರೋ ಪ್ರಿಯಾಂಕ (ದೂ. ಸಂ 88147899207) ಅವರನ್ನು ಸಂಪರ್ಕಿಸಬಹುದು. ಈ ಬಗ್ಗೆ ಖುದ್ದು ಜಂಟಿ ನಿರ್ದೇಶಕರು ಹಾಗೂ ಯೋಜನಾ ನಿರ್ದೇಶಕರೇ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಖಾಲಿ ಇರೋ 2.5 ಲಕ್ಷ ಹುದ್ದೆಗಳ ನೇಮಕಾತಿಗೆ ಸರ್ಕಾರ ನಿರ್ಧಾರ; ಪದವೀಧರರಿಗೆ ಭರ್ಜರಿ ಗುಡ್​ನ್ಯೂಸ್

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment