Advertisment

ಬೆಳಗಿನ ಜಾವ ನಡೆಯಿತು ದುರಂತ.. ಹಾಸಿಗೆಯಿಂದ ಎದ್ದೇಳ್ತಿದ್ದಂತೆ ಯುವಕ ದಾರುಣ ಸಾವು.. ಆಗಿದ್ದೇನು

author-image
Ganesh
Updated On
ಬೆಳಗಿನ ಜಾವ ನಡೆಯಿತು ದುರಂತ.. ಹಾಸಿಗೆಯಿಂದ ಎದ್ದೇಳ್ತಿದ್ದಂತೆ ಯುವಕ ದಾರುಣ ಸಾವು.. ಆಗಿದ್ದೇನು
Advertisment
  • ಕಾರ್ತಿಕ್ ಎಸ್ (19) ಮೃತಪಟ್ಟ ದುರ್ದೈವಿ
  • ಬಿಬಿಎ ವ್ಯಾಸಾಂಗ ಮಾಡುತ್ತಿದ್ದ ಮೃತ ಕಾರ್ತಿಕ್
  • ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಸ್ಥಳಕ್ಕೆ ಭೇಟಿ

ಶಿವಮೊಗ್ಗ: ವಿದ್ಯುತ್ ತಗುಲಿ ಯುವಕ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಬಳಿಯ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ.

Advertisment

ಕಾರ್ತಿಕ್ ಎಸ್ (19) ಮೃತಪಟ್ಟ ದುರ್ದೈವಿ. ಇಂದು ಬೆಳಗಿನ ಜಾವ ಮನೆ ಮುಂಭಾಗದಲ್ಲಿರುವ ಐಬೆಕ್ಸ್ ಬೇಲಿಯ ಬಳಿ ಮೂತ್ರ ವಿಸರ್ಜನೆ ಮಾಡುವಾಗ ದುರ್ಘಟನೆ ನಡೆದಿದೆ. ಏಕಾಏಕಿ ವಿದ್ಯುತ್ ಪ್ರವಹಿಸಿದ ಪರಿಣಾಮ ಕಾರ್ತಿಕ್ ಬೇಲಿಯ ಮೇಲೆ ಬಿದ್ದಿದ್ದಾನೆ.

ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಅಷ್ಟರಲ್ಲಾಗಲೇ ಪ್ರಾಣ ಬಿಟ್ಟಿದ್ದಾನೆ. ಮನೆಯ ಮುಂಭಾಗದ ಬೇಲಿಯ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಕಾರ್ತಿಕ್ ರಿಪ್ಪನ್ ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಬಿಎ ವ್ಯಾಸಾಂಗ ಮಾಡುತ್ತಿದ್ದ. ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಹಾಗೂ ಮೆಸ್ಕಾಂ ಸಿಬ್ಬಂದಿ ಆಗಮಿಸಿದ್ದಾರೆ.

ಇದನ್ನೂ ಓದಿ:KL ರಾಹುಲ್ ಟಿ-20 ಕರಿಯರ್​ ಖತಂ..? ಕೋಚ್ ಗಂಭೀರ್ ಕೂಡ ರಾಹುಲ್​ ಎಂಟ್ರಿಗೆ ಅಡ್ಡಿ..!

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment