/newsfirstlive-kannada/media/post_attachments/wp-content/uploads/2024/03/DKS.jpg)
ನವದೆಹಲಿ: ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಕಂಟಕವಾಗಿರುವ ನ್ಯಾಷನಲ್ ಹೆರಾಲ್ಡ್​​ ಕೇಸ್​ನಲ್ಲಿ ಈಗ ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ ಸುರೇಶ್ ಅವರ ಹೆಸರು ಥಳುಕು ಹಾಕಿಕೊಂಡಿದೆ. ಯಂಗ್ ಇಂಡಿಯಾ ಲಿಮಿಟೆಡ್‌ಗೆ ಡಿ.ಕೆ ಬ್ರದರ್ಸ್ ಬರೋಬ್ಬರಿ 5.80 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ನ್ಯಾಷನಲ್ ಹೆರಾಲ್ಡ್ ಆಸ್ತಿಗಳನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದ್ದ ಯಂಗ್ ಇಂಡಿಯಾ ಲಿಮಿಟೆಡ್‌ಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ನಿರ್ದೇಶಕರಾಗಿದ್ದಾರೆ. ಈ ಯಂಗ್ ಇಂಡಿಯಾ ಲಿಮಿಟೆಡ್‌ಗೆ ಡಿ.ಕೆ ಶಿವಕುಮಾರ್, ಡಿ.ಕೆ ಸುರೇಶ್ ಅವರು ದೇಣಿಗೆ ನೀಡಿದ್ದಾರೆ.
/newsfirstlive-kannada/media/post_attachments/wp-content/uploads/2024/08/NATIONAL-HERALD-CASE.jpg)
ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರಿಂದಲೂ ಯಂಗ್ ಇಂಡಿಯಾ ಲಿಮಿಟೆಡ್‌ಗೆ ದೇಣಿಗೆ ನೀಡಲಾಗಿದೆ. ರೇವಂತ್ ರೆಡ್ಡಿ ಅವರು ದೇಣಿಗೆ ನೀಡುವುದಲ್ಲದೇ, ಬೇರೆ 4 ನಾಯಕರಿಗೆ 80 ಲಕ್ಷ ರೂಪಾಯಿ ದೇಣಿಗೆ ನೀಡಲು ಸೂಚಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: BREAKING: ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ.. ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಗ್ರೀನ್​ಸಿಗ್ನಲ್..!
/newsfirstlive-kannada/media/post_attachments/wp-content/uploads/2023/12/Telangana-CM-Revanth-Reddy.jpg)
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು 142 ಕೋಟಿ ರೂಪಾಯಿ ಹಣ ದುರ್ಬಳಕೆ ಮಾಡಿದ್ದಾರೆ ಎಂದು ED (ಜಾರಿ ನಿರ್ದೇಶನಾಲಯ) ಹೇಳಿದೆ. ಯಂಗ್ ಇಂಡಿಯಾ ಲಿಮಿಟೆಡ್ ಕಂಪನಿಗೆ ತೆಗೆದುಕೊಂಡಿರುವ ದೇಣಿಗೆ ಸದುದ್ದೇಶ ಹೊಂದಿಲ್ಲ ಎನ್ನಲಾಗಿದೆ. ಈ ಎಲ್ಲಾ ಅಂಶಗಳನ್ನು ED (ಜಾರಿ ನಿರ್ದೇಶನಾಲಯ) ಕೋರ್ಟ್‌ಗೆ ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us