newsfirstkannada.com

ಅಬ್ಬಿ ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ; ತೀವ್ರ ಹುಡುಕಾಟ; ಆಗಿದ್ದೇನು?

Share :

Published June 23, 2024 at 8:06pm

Update June 23, 2024 at 8:07pm

  ಹೊಸನಗರ ತಾಲೂಕಿನ ಅಬ್ಬಿ ಫಾಲ್ಸ್ ನಲ್ಲಿ ನಡೆದ ದುರ್ಘಟನೆ

  12 ಜನರ ತಂಡದೊಂದಿಗೆ ಅಬ್ಬೆ ಫಾಲ್ಸ್​ ಹೋಗಿದ್ದ ವಿನೋದ್

  ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸರಿಂದ ಹುಡುಕಾಟ

ಶಿವಮೊಗ್ಗ: ಫಾಲ್ಸ್ ವೀಕ್ಷಣೆಗೆಂದು ಹೋಗಿದ್ದ ಸಾಫ್ಟ್‌ವೇರ್ ಉದ್ಯೋಗಿ ನಾಪತ್ತೆಯಾಗಿರೋ ಘಟನೆ ಹೊಸನಗರ ತಾಲೂಕಿನ ಅಬ್ಬಿ ಫಾಲ್ಸ್​ನಲ್ಲಿ ನಡೆದಿದೆ. ಬಳ್ಳಾರಿ ಮೂಲದ ವಿನೋದ್(26) ನಾಪತ್ತೆ ಆಗಿರುವ ಯುವಕ.

ಇದನ್ನೂ ಓದಿ: ದರ್ಶನ್ ಗ್ಯಾಂಗ್ ಜೈಲಲ್ಲಿ ಒಳಸಂಚು ರೂಪಿಸುತ್ತಾ.. ಕೋರ್ಟ್​ಗೆ ಪೊಲೀಸರು ಮತ್ತೆ ಮನವಿ ಮಾಡಿದ್ದೇನು?

ಫಾಲ್ಸ್​ಗೆ ತೆರಳಿದ್ದಾಗ ಕಾಲು ಜಾರಿ ಬಿದ್ದಿದ್ದಾನೆ ಎಂದು ಹೇಳಲಾಗುತ್ತಿದೆ. ನಾಪತ್ತೆಯಾದ ವಿನೋದ್ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಕೆಲಸ ಮಾಡುತ್ತಿದ್ದನಂತೆ. 12 ಜನರ ತಂಡದೊಂದಿಗೆ ಆಗಮಿಸಿ, ಕೊಡಚಾದ್ರಿಯಿಂದ ಅಬ್ಬೆ ಫಾಲ್ಸ್​ಗೆ ತೆರಳಿದ್ದರು. ಇದೇ ವೇಳೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಫಾಲ್ಸ್‌ ಬಳಿ ತೆರಳಿದ್ದಾಗ ಕಾಲು ಜಾರಿ ಬಿದ್ದಿದ್ದಾನೆ.

ಸದ್ಯ ನಾಪತ್ತೆಯಾಗಿರುವ ವಿನೋದ್​ಗಾಗಿ ಅಗ್ನಿಶಾಮಕ ದಳ ಹಾಗೂ ನಗರ ಠಾಣೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕತ್ತಲೆಯಾಗಿರುವ ಕಾರಣ ಪತ್ತೆ ಕಾರ್ಯಕ್ಕೆ ತೊಡಕು ಉಂಟಾಗಿದೆ. ಈ ಹಿಂದೆ ಕೊಲ್ಲೂರು ಘಾಟಿಗೆ ಹೊಂದಿಕೊಂಡಿರುವ ಅರಿಶಿನ ಗುಂಡಿ ಫಾಲ್ಸ್​ನಲ್ಲಿ ಭದ್ರಾವತಿ ಯುವಕ ಶರತ್ ಕಾಲು ಜಾರಿ ಬಿದ್ದಿದ್ದರು. ಶರತ್ ಕಾಲು ಜಾರಿ ಜಲಪಾತದಲ್ಲಿ ಬೀಳುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅಬ್ಬಿ ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ; ತೀವ್ರ ಹುಡುಕಾಟ; ಆಗಿದ್ದೇನು?

https://newsfirstlive.com/wp-content/uploads/2024/06/death17.jpg

Load More