/newsfirstlive-kannada/media/post_attachments/wp-content/uploads/2024/06/KDG_GIRL_DIE_NEW.jpg)
ಕೊಡಗು: ಇಂದು ಬೆಳಗ್ಗೆ ಯುವತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಡಿಕೇರಿ ತಾಲೂಕಿನ ನೆಲಜಿ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ:ನ್ಯೂಸ್ ಫಸ್ಟ್ ಇಂಫ್ಯಾಕ್ಟ್; ಆರೋಪಿ ರವಿ ಕುಟುಂಬಕ್ಕೆ ಹರಿದು ಬಂದ ನೆರವಿನ ಹಸ್ತ.. ಶಾಲೆಗೆ ಹೊರಟ ಮಕ್ಕಳು
ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ (24) ಮೃತ ಯುವತಿ. ಇವರು ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಎಂದಿನಂತೆ ಕೆಲಸಕ್ಕೆ ಹಾಜರಾಗಬೇಕು ಎಂದು ಇಂದು ಬೆಳಗ್ಗೆ ಮನೆಯಲ್ಲಿ ರೆಡಿಯಾಗುತ್ತಿದ್ದರು. ಈ ವೇಳೆ ಹೃದಯಾಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಗಳನ್ನು ಕಳೆದುಕೊಂಡ ಪೋಷಕರು, ಸಂಬಂಧಿಗಳ ಆಕ್ರಂದನ ಮುಗಿಲು ಮುಟ್ಟಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ