/newsfirstlive-kannada/media/post_attachments/wp-content/uploads/2025/03/Shivamogga-Girl-Current-Shock.jpg)
ಇತ್ತೀಚೆಗೆ ಬೆಂಗಳೂರು ಚಾಮರಾಜಪೇಟೆ ವಿಧಾನಸಭಾ ವ್ಯಾಪ್ತಿಯ ಆನಂದಪುರದಲ್ಲಿ ಮಹಿಳೆಯೊಬ್ಬರು ಕರೆಂಟ್ ಶಾಕ್‌ಗೆ ಬಲಿಯಾಗಿದ್ದರು. ಕುಡಿಯುವ ನೀರು ಹಿಡಿಯುವ ಮೋಟಾರ್‌ಗೆ ಕನೆಕ್ಷನ್ ಕೊಡುವಾಗ ವಿದ್ಯುತ್ ಪ್ರವಹಿಸಿ ಮಹಿಳೆ ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ಶಿವಮೊಗ್ಗದಲ್ಲಿ ಕೂಡ ವಿದ್ಯುತ್ ತಗುಲಿ ಯುವತಿ ಪ್ರಾಣ ಕಳೆದುಕೊಂಡಿದ್ದಾರೆ.
ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಸಮೀಪದ ಎಮ್ಮೆಹಟ್ಟಿ ಗ್ರಾಮದಲ್ಲಿ ಈ ದಾರುಣ ಘಟನೆ ನಡೆದಿದೆ. ಮೋಟಾರ್ ಸ್ಟಾರ್ಟ್ ಮಾಡುವಾಗ ಯುವತಿ ನಿಸರ್ಗ (15) ಮೃತಪಟ್ಟಿದ್ದಾಳೆ.
ಇದನ್ನೂ ಓದಿ: ಹೆತ್ತ ಮಕ್ಕಳನ್ನು ಬಕೆಟ್ ನೀರಿನಲ್ಲಿ ಮುಳುಗಿಸಿ ಪ್ರಾಣ ಬಿಟ್ಟ ಅಪ್ಪ.. ಶಾಕಿಂಗ್ ಸತ್ಯ ಬಯಲು; ಆಗಿದ್ದೇನು?
ನಿಸರ್ಗ ತಮ್ಮ ಮನೆಯಲ್ಲಿನ ಕುಡಿಯುವ ನೀರಿನ ಟ್ಯಾಂಕ್‌ಗೆ ನೀರು ಬಿಡುವ ಸಲುವಾಗಿ ಮೋಟಾರ್ ಆನ್ ಮಾಡಲು ತೆರಳಿದ್ದರು. ಈ ವೇಳೆ ಅವರಿಗೆ ಕರೆಂಟ್ ಹೊಡೆದಿದೆ. ಸ್ಥಳದಲ್ಲಿಯೇ ಕುಸಿದು ಬಿದ್ದ ನಿಸರ್ಗ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಹೊಳೆಹೊನ್ನೂರು ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us