/newsfirstlive-kannada/media/post_attachments/wp-content/uploads/2024/07/KLB_YOUTH.jpg)
ಕಲಬುರಗಿ: ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವನ್ನಪ್ಪಿದ್ದಾನೆ ಎಂದು ಗುಲ್ಬರ್ಗಾ ಹಾರ್ಟ್ ಫೌಂಡೇಶನ್ ಆಸ್ಪತ್ರೆ ವಿರುದ್ಧ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಜೇವರ್ಗಿ ತಾಲೂಕಿನ ಅಂಕಲಗಿ ಗ್ರಾಮದ ಶರಣಬಸಪ್ಪ (24) ಮೃತ ಯುವಕ. ಹೊಟ್ಟೆ ನೋವು, ವಾಂತಿ ಆಗುತ್ತಿದೆ ಎಂದು ಯುವಕನನ್ನು ಜುಲೈ 22 ರಂದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಎರಡು ದಿನಗಳಿಂದ ಡಾಕ್ಟರ್ಸ್​ ಸರಿಯಾಗಿ ಚಿಕಿತ್ಸೆ ನೀಡಲಿಲ್ಲ. ಹೀಗಾಗಿ ಬೇರೆ ಆಸ್ಪತ್ರೆಗೆ ಯುವಕನನ್ನು ಕರೆದುಕೊಂಡು ಹೋಗಿ ದಾಖಲು ಮಾಡುತ್ತೇವೆ ಎಂದು ಹೇಳಿದರೂ ವೈದ್ಯರು ಬಿಡಲಿಲ್ಲ. ಇದರಿಂದಾಗಿ ಆಸ್ಪತ್ರೆಯಲ್ಲಿದ್ದರೂ ಸರಿಯಾಗಿ ಚಿಕಿತ್ಸೆ ನೀಡದೆ ವೈದ್ಯರು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ