ರಸ್ತೆಯಲ್ಲಿ ನಡೆದು ಹೋಗುವಾಗ ಯುವಕನನ್ನ ಗುರಾಯಿದ್ದನು
ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಕೊಂದು ಬಿಟ್ರಾ?
ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಿಸದೆ ಯುವಕ ಮೃತಪಟ್ಟಿದ್ದಾನೆ
ಬೆಂಗಳೂರು: ಗುರಾಯಿಸಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ: ತುಂಗಾಭದ್ರ ಡ್ಯಾಂ ಭರ್ತಿಗೆ ಕೆಲವೇ ಅಡಿಗಳು ಬಾಕಿ.. 3 ವಾರದಲ್ಲಿ ಹರಿದು ಬಂದಿರೋ ನೀರು ಎಷ್ಟು?
ಹೊಯ್ಸಳ ನಗರದ ಮನೋಜ್ (22) ಕೊಲೆಯಾದ ಯುವಕ. ಹೊಯ್ಸಳ ನಗರ 3ನೇ ಮುಖ್ಯರಸ್ತೆಯಲ್ಲಿ ಸ್ನೇಹಿತರೊಂದಿಗೆ ಯುವಕ ನಡೆದುಕೊಂಡು ಹೋಗುತ್ತಿದ್ದನು. ಈ ವೇಳೆ ಎದುರಿನಿಂದ ಬಂದ ವ್ಯಕ್ತಿ, ಯುವಕನನ್ನು ಗುರಾಯಿಸಿಕೊಂಡು ಹೋಗುತ್ತಿದ್ದನು. ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ದೊಡ್ಡ ಗಲಾಟೆಯೇ ಆಗಿದೆ.
ಇದನ್ನೂ ಓದಿ: ಕನ್ವರ್ ಯಾತ್ರೆಗೆ ಯೋಗಿ ಸರ್ಕಾರದ ರೂಲ್ಸ್ ಏನು..? ಬಿಟೌನ್ ಬ್ಯೂಟಿ ಕಂಗನಾ- ಸೋನ್ ಸೂದ್ ಮಧ್ಯ ವಾರ್
ಈ ವೇಳೆ ಪರಿಸ್ಥಿತಿ ಕೈಮೀರಿ ಹೋಗಿದ್ದರಿಂದ ಯುವಕನ ಮೇಲೆ ವ್ಯಕ್ತಿ ಮಾರಣಾಂತಿಕ ಹಲ್ಲೆ ಮಾಡಿದ್ದನು. ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಸ್ಥಳೀಯ ಆಸ್ಪತ್ರೆಗೆ ಸ್ನೇಹಿತರು ದಾಖಲು ಮಾಡಿ ಚಿಕಿತ್ಸೆ ಕೊಡಿಸುತ್ತಿದ್ದರು. ಆದರೆ ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಿಸದೆ ಮನೋಜ್ ಸಾವನ್ನಪ್ಪಿದ್ದಾನೆ. ಇನ್ನು ಈ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲು ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ