/newsfirstlive-kannada/media/post_attachments/wp-content/uploads/2024/06/Yuva-Rajkumar-Divorce.jpg)
ಬೆಂಗಳೂರು: ಚಂದನ್ ಶೆಟ್ಟಿ, ನಿವೇದಿತಾ ಗೌಡ ಡಿವೋರ್ಸ್ ಸುದ್ದಿ ಕೇಳಿ ಬಂದ ಬಳಿಕ ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ಡಿವೋರ್ಸ್ ಕೇಸ್ ಬೆಳಕಿಗೆ ಬಂದಿದೆ. ದೊಡ್ಮನೆ ಮಗ ಗುರು ರಾಜ್​ಕುಮಾರ್ @ ಯುವ ರಾಜ್​ಕುಮಾರ್ ಅವರು ಫ್ಯಾಮಿಲಿ ಕೋರ್ಟ್​​ನಲ್ಲಿ ಡಿವೋರ್ಸ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ.
/newsfirstlive-kannada/media/post_attachments/wp-content/uploads/2024/06/Yuva-Rajkumar-Divorce-1.jpg)
ಇದನ್ನೂ ಓದಿ:ನಿವೇದಿತಾಗೆ ಡಿವೋರ್ಸ್ ಕೊಟ್ಟಿದ್ದು ಯಾಕಂದ್ರೆ.. ಕೊನೆಗೂ ಕಾರಣ ಹೇಳಲು ಮುಂದೆ ಬಂದ ಚಂದನ್!
ಹೌದು.. ಸ್ಯಾಂಡಲ್​ವುಡ್ ದೊಡ್ಮನೆಯಲ್ಲಿ ಮೊದಲ ಡಿವೋರ್ಸ್ ಕೇಸ್ ಬೆಳಕಿಗೆ ಬಂದಿದೆ. ಕಳೆದ ಜೂನ್ 6ರಂದು ದೊಡ್ಮನೆ ಮಗ ಯುವ ರಾಜ್​ಕುಮಾರ್ ಅವರು ಫ್ಯಾಮಿಲಿ ಕೋರ್ಟ್​​ನಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.
MC ಌಕ್ಟ್ ಸೆಕ್ಷನ್ 13(1)(ia) ಅಡಿಯಲ್ಲಿ ಯುವ ರಾಜ್‌ಕುಮಾರ್ ಅವರು ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಯುವರಾಜ್ ಕುಮಾರ್ ಅರ್ಜಿಯ ಹಿನ್ನೆಲೆಯಲ್ಲಿ ಯುವ ಪತ್ನಿ ಶ್ರೀದೇವಿ ಭೈರಪ್ಪಗೆ ಕೋರ್ಟ್​ನಿಂದ ನೋಟಿಸ್ ಜಾರಿಯಾಗಿದೆ. ವಿಚ್ಛೇದನದ ಕೇಸ್‌ನಲ್ಲಿ ಫ್ಯಾಮಿಲಿ ಕೋರ್ಟ್ ಮುಂದಿನ ಜುಲೈ ತಿಂಗಳ 4ನೇ ತಾರೀಕಿಗೆ ವಿಚಾರಣೆ ನಿಗದಿ ಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us